ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ, ಯೆಲ್ಲೊ ಅಲರ್ಟ್ ಘೋಷಣೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (09:48 IST)
ಬೆಂಗಳೂರು: ಕೆಲವು ದಿನಗಳಿಂದ ಬಿಡುವು ಪಡೆದಿದ್ದ ವರುಣ ಮತ್ತೆ ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ,ಮೈಸೂರು, ಕೊಡಗು, ಧಾರವಾಡ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಣ್ಣ ಮಟ್ಟಿಗೆ ಮಳೆಯಾಗುತ್ತಲೇ ಇದೆ.

ಹಾಗಿದ್ದರೂ ಹಗಲು ಗರಿಷ್ಠ ಉಷ್ಣಾಂಶವಿರುತ್ತದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ನಷ್ಟಿದ್ದರೆ ಕನಿಷ್ಠ ಉಷ್ಣಾಂಶ 19.2 ಡಿಗ್ರಿಯಷ್ಟಿದೆ. ರಾಜ್ಯದ ಬಹುತೇಕ ಕಡೆ ಮಳೆಯ ಜೊತೆಗೆ ವಿಪರೀತ ತಾಪಮಾನವೂ ಕಂಡುಬರುತ್ತಿದೆ. ಇಂದೂ ಕೂಡಾ ಸಂಜೆ ಮಳೆಯಾಗುವ ಸಾಧ್ಯತೆಯಿದೆ.

ನಿನ್ನೆ ರಾಮನಗರ, ಮೈಸೂರಿನ ಕೆಲವೆಡೆ, ನಂಜನಗೂಡು, ಚಾಮರಾಜನಗರ, ಬೈಲಹೊಂಗಲ ಸೇರಿದಂತೆ ಹಲವೆಡೆ ನಿನ್ನೆ ಮಳೆಯಾಗಿದೆ. ಇಂದೂ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಸೇರಿದಂತೆ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ದಿನ ಮಳೆ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments