Select Your Language

Notifications

webdunia
webdunia
webdunia
webdunia

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ ಬರಲಿದೆ ಇಲ್ಲಿದೆ ವಿವರ

Bangalore Rains

Krishnaveni K

ಬೆಂಗಳೂರು , ಬುಧವಾರ, 4 ಡಿಸೆಂಬರ್ 2024 (10:33 IST)
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಬೆಂಗಳೂರಿನಲ್ಲಿ ಶನಿವಾರದಿಂದ ನಿನ್ನೆಯವರೆಗೆ ನಿರಂತರ ಮಳೆಯಾಗುತ್ತಿತ್ತು. ಆದರೆ ನಿನ್ನೆ ಅಪರಾಹ್ನದಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಇಂದು ಸಣ್ಣ ಪ್ರಮಾಣದಲ್ಲಿ ಸೂರ್ಯನ ಆಗಮನವಾಗಿದೆ. ಹೀಗಾಗಿ ಇಂದು ಬೆಂಗಳೂರಿಗರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಹವಾಮಾನ ಇಲಾಖೆಯ ವರದಿ ಪ್ರಕಾರ ಇಂದು ಕರ್ನಾಟಕದ ಕೆಲವು ಭಾಗಗಳಲ್ಲಿ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ. ಇದಲ್ಲದೆ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಲಕ್ಷದ್ವೀಪ, ಗೋವಾ, ಒಡಿಶಾ ಮತ್ತು ಅಂಡಮಾನ್ ಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ವಿಚಾರಕ್ಕೆ ಬಂದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಹನಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕರಾವಳಿ ಭಾಗಕ್ಕೆ ಮಾತ್ರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಪತ್ನಿ ಹೆಸರಿಗೆ ಸೈಟು ನೀಡಿದ ಪ್ರಕ್ರಿಯೆಯೇ ಅಕ್ರಮ: ಸಿಎಂಗೆ ಸಂಕಷ್ಟ