ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ ಎಲ್ಲೆಲ್ಲಿ ಎಷ್ಟು ದಿನಗಳವರೆಗೆ ಮಳೆಯಾಗಲಿದೆ ಎಂಬ ಲೇಟೆಸ್ಟ್ ಮಾಹಿತಿ ಇಲ್ಲಿದೆ.
									
			
			 
 			
 
 			
					
			        							
								
																	ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈಗಿನ ಹವಾಮಾನ ವರದಿ ಪ್ರಕಾರ ಈ ಜಿಲ್ಲೆಗಳಲ್ಲಿ ಜುಲೈ 7 ರವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
									
										
								
																	ಇದಲ್ಲದೆ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಚಾಮರಾಜನಗರ, ಗದಗ, ಚಿತ್ರದುರ್ಗ, ಹಾಸನ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರು ಮುಂತಾದೆಡೆಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
									
											
							                     
							
							
			        							
								
																	ಇದೀಗ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಉಳಿದ ಕಡೆ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದದೆ. ಆಗೊಂದು, ಈಗೊಂದು ಎಂಬಂತೆ ಸಾಧಾರಣ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಕಾಲ ಈ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.  ಸದ್ಯಕ್ಕೆ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27.9 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿವರೆಗಿದೆ.