ಬೆಂಗಳೂರು: ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಇಂದೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯಾವ ಜಿಲ್ಲೆಗಳಲ್ಲಿ ಇನ್ನು ಎಷ್ಟು ದಿನ ಮಳೆ ಇಲ್ಲಿದೆ ಹವಾಮಾನ ವರದಿ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಿನ್ನೆಯೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದೂ ಕೋಲಾರದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಇದಲ್ಲದೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಭಾರೀ ಮಳೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕರ್ನಾಟಕದ ಒಟ್ಟು 10 ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಕೋಲಾರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದು ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯ ಸೂಚನೆಯಿದ್ದು ಎಚ್ಚರಿಕೆಯಿಂದಿರುವುದು ಹವಾಮಾನ ಇಲಾಖೆ ಹೇಳಿದೆ. ಕಡಲ ಅಬ್ಬರ ಹೆಚ್ಚಾಗಿದ್ದು, ಸಮುದ್ರ ತೀರಗಳಿಗೆ ತೆರಳದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವವರು ಕುಮಾರಧಾರಾ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇನ್ನೂ ಎರಡು ದಿನ ಮಳೆಯ ಸೂಚನೆಯಿದ್ದು, ಜನರು ಎಚ್ಚರಿಕೆಯಿಂದಿರಸಲು ಸೂಚಿಸಲಾಗಿದೆ.