Publish Date: Thu, 29 Aug 2024 (12:05 IST)
Updated Date: Thu, 29 Aug 2024 (12:07 IST)
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯಾಗುತ್ತಿದೆ. ಈ ದಿನದವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿಯಲ್ಲಿ ಈ ಬಾರಿ ಭಾರೀ ಮಳೆಯಾಗಿದೆ. ಆದರೆ ಕಳೆದ ವಾರ ವರುಣ ಕೊಂಚ ಬಿಡುವು ನೀಡಿದ್ದ. ಆದರೆ ಈಗ ಮತ್ತೆ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೀಗ ಮಳೆ ಬಗ್ಗೆ ಹವಾಮಾನ ಇಲಾಖೆ ಲೇಟೆಸ್ಟ್ ಅಪ್ ಡೇಟ್ ನೀಡಿದೆ.
ಆಗಸ್ಟ್ 31 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ವಾಯುಭಾರ ಕುಸಿತವಾಗುವ ಸಾಧ್ಯತೆಯಿದ್ದು, ಆಗಸ್ಟ್ 31 ಅಥವಾ ಸೆಪ್ಟೆಂಬರ್ 1 ರವರೆಗೂ ಮಳೆಯಾಗಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಆಗಸ್ಟ್ 31 ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ.