Publish Date: Mon, 03 Sep 2018 (11:21 IST)
Updated Date: Mon, 03 Sep 2018 (11:23 IST)
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಸದ್ಯದ ಫಲಿತಾಂಶದ ಪ್ರಕಾರ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ ದ್ವಿತೀಯ ಸ್ಥಾನದಲ್ಲಿದೆ.
ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಇತ್ತೀಚೆಗಿನ ವರದಿ ಬಂದಾಗ ಕಾಂಗ್ರೆಸ್ 664 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 593 ಸ್ಥಾನಗಳಲ್ಲಿ ಗೆದ್ದು ದ್ವಿತೀಯ ಸ್ಥಾನದಲ್ಲಿದೆ. ಜೆಡಿಎಸ್ 221 ಸ್ಥಾನಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದರೆ 195 ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಎಲ್ಲಾ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ಇದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಫಲಿತಾಂಶ ಸಿಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.