Select Your Language

Notifications

webdunia
webdunia
webdunia
webdunia

ಪ್ರಾಸಿಕ್ಯೂಷನ್ ಗೆ ಅನುಮತಿಗೂ ಮೊದಲೇ ಬಿಎಸ್ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ತನಿಖೆ ಶುರು

BS Yediyurappa

Krishnaveni K

ಬೆಂಗಳೂರು , ಶುಕ್ರವಾರ, 29 ನವೆಂಬರ್ 2024 (09:59 IST)
ಬೆಂಗಳೂರು: 2020 ರಲ್ಲಿ ಬಿಡಿಎ ಅಪಾರ್ಟ್ ಮೆಂಟ್ ಟೆಂಡರ್ ಗೆ 12 ಕೋಟಿ ರೂ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೊದಲೇ ಲೋಕಾಯಕ್ತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮನವಿ ಮಾಡಿತ್ತು. ಆದರೆ ಅಸಲಿಗೆ ಯಡಿಯೂರಪ್ಪ  ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳುವ ಅಗತ್ಯವಿಲ್ಲ. ಯಾಕೆಂದರೆ ಯಡಿಯೂರಪ್ಪ ಈಗ ಮುಖ್ಯಮಂತ್ರಿ ಅಥವಾ ಯಾವುದೇ ಉನ್ನತ ಹುದ್ದೆಯಿಲ್ಲ.

ಹಾಗಿದ್ದರೂ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಬಿಜೆಪಿ ಕುಮ್ಮಕ್ಕಿನಿಂದಲೇ ಅನುಮತಿ ಗಿಟ್ಟಿಸಿಕೊಂಡಿದ್ದರು ಎಂಬುದು ಕಾಂಗ್ರೆಸ್ ನಾಯಕರ ಆರೋಪವಾಗಿದೆ. ಅದಕ್ಕೆ ಪ್ರತಿಯಾಗಿ ಎಂಬಂತೆ ಈಗ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಮನವಿ ಮಾಡಿತ್ತು.

ಈ ಬಗ್ಗೆ ರಾಜ್ಯಪಾಲರು ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲೇ ಈಗ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಈ ತನಿಖೆ ನಡೆಯುತ್ತಿದೆ ಎನ್ನುವುದು ಬಿಜೆಪಿ ಆರೋಪವಾಗಿದೆ. ಒಂದೆಡೆ ಯತ್ನಾಳ್ ಬಣ ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದರೆ ಇತ್ತ ಹಗರಣವೊಂದರಲ್ಲಿ ತನಿಖೆಗೆ ಲೋಕಾಯುಕ್ತರು ಮುಂದಾಗಿರುವುದು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕು ಇರಬಾರದು ಎಂದು ಹೇಳಿಕೆ ನೀಡಿದ್ದಕ್ಕೆ ಸ್ವಾಮೀಜಿ ವಿರುದ್ಧ ಎಫ್ಐಆರ್