Select Your Language

Notifications

webdunia
webdunia
webdunia
webdunia

ವಿಧಾನಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

Vidhanasoudha

Krishnaveni K

ಬೆಂಗಳೂರು , ಸೋಮವಾರ, 20 ಮೇ 2024 (17:52 IST)
ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಕಾವೇರಲಿದೆ. ಪರಿಷತ್ ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ದಿನಾಂಕ ಪ್ರಕಟಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. ವಿಧಾನಪರಿಷತ್ ನ 11 ಸದಸ್ಯರ ಅಧಿಕಾರಾವಧಿ ಜೂನ್ 11 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 13 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅದೇ ದಿನ ಫಲಿತಾಂಶವೂ ಪ್ರಕಟವಾಗಲಿದೆ.

ಜೂನ್ 3 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಲ್ಕರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಜೂನ್ 13 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ ವಿಧಾನಸಭೆಯ ಬಲಾಬಲವನ್ನಾಧಿರಿಸಿ 11 ರಲ್ಲಿ 7 ಸ್ಥಾನ ಕಾಂಗ್ರೆಸ್ ಪಾಲಾಗಲಿದೆ. ಉಳಿದಂತೆ ಬಿಜೆಪಿಗೆ ಮೂರು, ಜೆಡಿಎಸ್ ಗೆ ಒಂದು ಸ್ಥಾನ ದೊರೆಯುವ ನಿರೀಕ್ಷೆಯಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ಕೊಲೆಗಡುಕರಿಗೆ ಹರ್ಷ: ಆರ್ ಅಶೋಕ್ ವಾಗ್ದಾಳಿ