Daily Horoscope

Select Your Language

Notifications

webdunia
webdunia
webdunia
webdunia

ಉಕ್ರೇನ್ನಲ್ಲಿ ಕನ್ನಡಿಗ ನವೀನ್ ಸಾವು - ಕರೆ ಮಾಡಿ ಸಿಎಂ ಬೊಮ್ಮಾಯಿ ಸಾಂತ್ವನ

cm basavaraj bommai
ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿಎಂ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
 
ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಗನ ಬಗ್ಗೆ ಮಾಹಿತಿ ನೀಡಿದ ಶೇಖರಗೌಡ ಗ್ಯಾನ ಗೌಡರ್ ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು, ಮೂರು ಬಾರಿ ಕರೆ ಮಾಡಿ ಮಾತಾಡುತ್ತಿದ್ದ ಎಂದು ವಿವರಿಸಿದರು.
 
ನವೀನ್ ಸಾವು ಅತ್ಯಂತ ದುರಾದೃಷ್ಟಕರ. ಭಗವಂತ ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಚುನಾವಣೆ ಮುಂದೂಡಿಕ್ಕೆ ಶಾಸಕರ ಕೈವಾಡ