Select Your Language

Notifications

webdunia
webdunia
webdunia
webdunia

ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು

karnataka new cabinet dessions
bangalore , ಬುಧವಾರ, 4 ಆಗಸ್ಟ್ 2021 (20:23 IST)
1.       ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು  ತೀರ್ಮಾನಿಸಲಾಯಿತು. ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಎಲ್ಲ ಸಚಿವರಿಗೆ ಸೂಚಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ತಿಳಿಸಿದರು.
 
2.       ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲು ತೀರ್ಮಾನಿಸಲಾಯಿತು.
 
3.       ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಯಿತು.
 
4.       ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 1769 ಮಂದಿಗೆ ಕೊರೊನಾ ಸೋಂಕು; 1714 ಡಿಸ್ಚಾರ್ಜ್