ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಈಗ ಅಬ್ಬರಿಸುತ್ತಿಲ್ಲ ಎಂದಾದರೂ ಕೆಲವು ಪ್ರದೇಶಗಳಿವೆ ಮಾತ್ರ ಸಾಕಷ್ಟು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆ, ಯಾವ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ನೋಡಿ.
ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಇಂದೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ರಾಯಚೂರು, ಉತ್ತರ ಕನ್ನಡ, ಬೀದರ್ ಹಾವೇರಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ಉಡುಪಿ, ಚಿಕ್ಕಮಗಳೂರು, ಕೋಲಾರ, ತುಮಕೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗಿಲ್ಲ. ವಿಪರೀತ ಬಿಸಿಲು, ಸೆಖೆಯ ವಾತಾವರಣವಿದೆ. ಸಂಜೆ ಮಾತ್ರ ಮೋಡಕವಿದ ವಾತಾವರಣವಿರುತ್ತದೆ. ಇಂದು ರಾಜ್ಯದ ಒಟ್ಟಾರೆ ಗರಿಷ್ಠ ತಾಪಮಾನ 33 ಡಿಗ್ರಿಯವರೆಗೆ ಇರುವ ಸಾಧ್ಯತೆಯಿದೆ.