ಮುಂದಿನ ಎರಡು ದಿನ ಹುಷಾರು: ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ

Krishnaveni K
ಶನಿವಾರ, 6 ಜುಲೈ 2024 (11:06 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಯಥೇಚ್ಛವಾಗಿ ಆಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂದಿನ 72 ಗಂಟೆಗಳ ಕಾಲ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ಕಳೆದ ಒಂದು ವಾರದಿಮದ ನಿರಂತರ ಮಳೆಯಾಗುತ್ತಿದೆ. ಇದು ಇನ್ನೂ ಮೂರ್ನಾಲ್ಕು ದಿನ ಮುಂದುವರಿಯುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಡೆ ಕರಾವಳಿ ಭಾಗದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನೀರು ನುಗಿದ್ದ ವರದಿಯಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಏರಿಳಿತ ಪರಿಣಾಮ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ದಾವಣಗೆರೆ ಮುಂತಾದೆಡೆ ಸಾಧಾರಣ ಮಳೆಯಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆಯ ವಾತಾವರಣವಿದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಮಾನ್ಯ ಮಳೆಯಾಗಿದೆ. ಆದರೆ ಹಾವೇರಿ, ಗದಗ, ಕೊಪ್ಪಳ ಮುಂತಾದೆಡೆ ನಿರೀಕ್ಷಿತ ಮಳೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯ್ ರಾಜಕೀಯ ಹಾದಿ ಜತೆ ನನ್ನ ಹೋಲಿಕೆ ಸರಿಯಲ್ಲ: ಪವನ್ ಕಲ್ಯಾಣ್

ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್ ಮನೆಗೆಯೇ ನುಗ್ಗಿದ್ದ ಖದೀಮರು, ₹15ಲಕ್ಷದ ಚಿನ್ನ ಕಳ್ಳತನ

ಅಂದು ಪ್ರಧಾನಿ ಮೋದಿ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ ಎಂದಾಗಲೂ ನಾವು ಪಾಲಿಸಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್‌

ತಮಿಳುನಾಡು ಚುನಾವಣೆ: ಅಕ್ರಮವಾಗಿ ವೋಟ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ 10ವಿದೇಶಿ ಪ್ರಜೆಗಳು ಅರೆಸ್ಟ್‌

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ಮುಂದಿನ ಸುದ್ದಿ
Show comments