Publish Date: Tue, 12 Aug 2025 (08:43 IST)
Updated Date: Tue, 12 Aug 2025 (08:47 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ವರದಿಗಳ ಪ್ರಕಾರ ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ದಿನದ ಹವಾಮಾನ ವರದಿ ಇಲ್ಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಎರಡು ದಿನಗಳಿಂದ ಮಳೆಯಾಗುತ್ತಿದೆ. ಹವಾಮಾನ ವರದಿ ಪ್ರಕಾರ ಆಗಸ್ಟ್ 9 ರಿಂದ 13 ರವರೆಗೆ ಭಾರೀ ಮಳೆಯ ಸೂಚನೆಯಿತ್ತು. ಅದರಂತೆ ನಾಳೆಯವರೆಗೂ ರಾಜ್ಯದಲ್ಲಿ ಭಾರೀ ಮಳೆಯ ಸೂಚನೆಯಿದೆ.
ಕರಾವಳಿ ಭಾಗದಲ್ಲಿ ಈ ಬಾರಿ ಅತೀ ಹೆಚ್ಚು ಮಳೆಯಾಗಿತ್ತು. ಆದರೆ ಮೊದಲಿನ ಅಬ್ಬರವಿಲ್ಲದೇ ಹೋದರೂ ಕರಾವಳಿ ಈ ಜಿಲ್ಲೆಗಳಲ್ಲಿ ಈಗಲೂ ಮಳೆಯಾಗುತ್ತಲೇ ಇದೆ. ವಿಶೇಷವಾಗಿ ಇಂದು ಉಡುಪಿ ಜಿಲ್ಲೆಗೆ ಭಾರೀ ಮಳೆಯಾಗುವ ಸೂಚನೆಯಿದೆ.
ಉಳಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಕಲಬುರಗಿ, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದೆ.