ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಈ ದಿನದವರೆಗೂ ಭಾರೀ ಮಳೆಯಾಗಲಿದೆ.
ಕಳೆದ ವಾರವಿಡೀ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಿತ್ತು. ಆದರೆ ವಾರಂತ್ಯದಿಂದ ಕರಾವಳಿಯಲ್ಲೂ ಭಾರೀ ಮಳೆ ಆರಂಭವಾಗಿದೆ. ಈ ವಾರವೂ ಅದು ಮುಂದುವರಿಯಲಿದೆ.
ಹವಾಮಾನ ವರದಿ ಪ್ರಕಾರ ಇಂದಿನಿಂದ ನಾಲ್ಕೈದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಆಗಸ್ಟ್ 21 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಆದರೆ ವಾರಂತ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಾಗಲಿದೆ.
ಬೆಂಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಉಳಿದಂತೆ ಉತ್ತರ ಭಾಗದ ಜಿಲ್ಲೆಗಳಲ್ಲಿ ವಾರವಿಡೀ ಮಳೆಯ ಸಂಭವವಿದೆ ಎಂದು ತಿಳಿದುಬಂದಿದೆ.