ಬೆಂಗಳೂರು: ರಾಜ್ಯದ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದಿನವರೆಗೂ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಅಪರಾಹ್ನದ ನಂತರ ಮತ್ತು ರಾತ್ರಿ ಮಳೆಯಾಗುತ್ತಿದೆ. ಇದರಿಂದಾಗಿ ಜನ ಸಂಜೆ ಕಚೇರಿ ಮುಗಿಸಿ ಮನೆಗೆ ತೆರಳುವವರು ಪರದಾಡುವಂತಾಗಿದೆ. ಇಂದೂ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಆಗಸ್ಟ್ 16 ವರೆಗೂ ಬೆಂಗಳೂರಿಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ.
ಈ ವಾರವಿಡೀ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆಗಸ್ಟ್ 15 ರ ನಂತರ ಮಳೆ ಇನ್ನಷ್ಟು ಬಿರುಸಾಗುವ ಸಾಧ್ಯತೆಯಿದೆ.
ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೀದರ್, ಬಳ್ಳಾರಿ, ಚಿತ್ರದುರ್ಗ, ಗದಗ, ಬೀದರ್, ಕೊಪ್ಪಳ, ಹಾವೇರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲೂ ಭಾರೀ ಮಳೆಯ ಸಂಭವವಿದೆ.