Daily Horoscope

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

Krishnaveni K
ಮಂಗಳವಾರ, 24 ಜೂನ್ 2025 (08:28 IST)
ಬೆಂಗಳೂರು: ಎರಡು ದಿನ ಕೊಂಚ ಮಟ್ಟಿಗೆ ತಗ್ಗಿದ ವರುಣ ಇಂದಿನಿಂದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದ್ದಾನೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ. ಎಲ್ಲೆಲ್ಲಿ ಮಳೆಯಿರಲಿದೆ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಕಳೆದ ವಾರ ಅರಂಭದಲ್ಲಿ ಭಾರೀ ಮಳೆಯಿತ್ತು. ವಾರಂತ್ಯದ ವೇಳೆಗೆ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಗ್ಗಿತ್ತು. ಇದರಿಂದ ನೆರೆ ಭೀತಿಯಲ್ಲಿದ್ದ ಜನ ಸಮಾಧಾನಪಡುವಂತಾಗಿತ್ತು. ಆದರೆ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಜೂನ್ 26 ರಿಂದ ರಾಜ್ಯಾದ್ಯಂತ ಮತ್ತೆ ಮುಂಗಾರು ಬಿರುಸುಗೊಳ್ಳಲಿದೆ. ಅದಕ್ಕೆ ಮೊದಲೇ ಕೆಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಈ ಜಿಲ್ಲೆಗಳಲ್ಲಿ ಈ ಬಾರಿ ವ್ಯಾಪಕ ಮಳೆಯಾಗುತ್ತಿದೆ. ಬುಧವಾರದ ಬಳಿಕ ಇಲ್ಲಿ ಮಳೆ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಉಳಿದಂತೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಕೋಲಾರ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments