Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಮತದಾನ ಮುಕ್ತಾಯ: ಇಬ್ಬರು ಬಿಜೆಪಿಗರಿಂದ ಪಕ್ಷಕ್ಕೇ ಏಟು

Election

Krishnaveni K

ಬೆಂಗಳೂರು , ಮಂಗಳವಾರ, 27 ಫೆಬ್ರವರಿ 2024 (17:26 IST)
ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಸಭೆಗೆ ನಡೆದ ಚುನಾವಣಾ ಪ್ರಕ್ರಿಯೆ ಅಂತ್ಯವಾಗಿದ್ದು, ಇಬ್ಬರು ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದಾರೆ.

ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮತದಾನ ನಡೆಸಿದ್ದಾರೆ. ಈ ಪೈಕಿ ಇಬ್ಬರು ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದಾರೆ.  ಒಟ್ಟು 223  ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು.

ಉಳಿದಂತೆ ಕಾಂಗ್ರೆಸ್ ನ 135 ಶಾಸಕರು, ಬಿಜೆಪಿಯ 65 ಮತ್ತು ಜೆಡಿಎಸ್ ನ 19 ಮತ್ತು ಮೂವರು ಪಕ್ಷೇತರ ಶಾಸಕರು ಮತದಾನ ಮಾಡಿದ್ದಾರೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಗೆ ಮತದಾನ ಮಾಡಿದ್ದಾರೆ. ಮತ್ತೊಬ್ಬ ಶಾಸಕ ಶಿವರಾಮ್ ಹೆಬ್ಬಾರ್ ಚುನಾವಣೆ ಮಾಡದೇ ಇರುವುದು ಬಿಜೆಪಿಗೆ ಮುಳುವಾಗಿದೆ.

ಸದ್ಯದ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲ್ಲುವುದು ನಿಶ್ಚಿತವಾಗಿದೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಸೋಲುವುದು ಖಚಿತವಾಗಿದೆ. ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ನೀಡಿದ 15 ಲಕ್ಷ ಪರಿಹಾರ ನಿರಾಕರಿಸಿದ ವಯನಾಡು ಆನೆ ದಾಳಿ ಸಂತ್ರಸ್ತ ಕುಟುಂಬ