Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ" ದಿನಾಚರಣೆ

Karnataka Rajyotsava
bangalore , ಬುಧವಾರ, 1 ನವೆಂಬರ್ 2023 (14:00 IST)
ಕರ್ನಾಟಕ ರಾಜ್ಯೋತ್ಸವ"ದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದಲ್ಲಿ ಧ್ವಜಾರೋಹಣ ನೇರವೇರಿಸಲಾಯ್ತು.ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಧ್ವಜಾರೋಹಣ ಮಾಡಿದ್ರು.ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ರು.
 
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಣೆ ಮಾಡಲಾಯಿತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಕ್ರಮವಾಗಿ 05 ಕನ್ನಡ ಗೀತೆಗಳನ್ನು  ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಕೊಲೆ