Select Your Language

Notifications

webdunia
webdunia
webdunia
webdunia

ಕರ್ನಾಟಕದ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ನಿಧನ

EX Chief Minister SM Krishna No More, SM Krishna Political Journey, SM Krishna Final Funeral Ceremony,

Sampriya

ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2024 (07:30 IST)
Photo Courtesy X
ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ,  ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ (92) ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ  ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾದರು.

92ವಯಸ್ಸಿನ ಎಸ್ಎಂ ಕೃಷ್ಣ ಅವರು ಕಳೆದ 6ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಈಚೆಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡ ಅವರಿಗೆ ಕೆಲ ತಿಂಗಳುಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ  ಅವರ  ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಬೆಳಗ್ಗೆ 3:30ಕ್ಕೆ ಎಸ್ಎಂ ಕೃಷ್ಣ ಮರಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.

2017 ರಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದ ಕೃಷ್ಣ ಅವರು ಅದೇ ವರ್ಷದಲ್ಲಿ ಬಿಜೆಪಿಗೆ ಸೇರಿದರು.  2023ರ ಜನವರಿ 7 ರಂದು ಕೃಷ್ಣ ಅವರು ತಮ್ಮ 60 ವರ್ಷಗಳ ಸುರ್ಧೀಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.


2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ: ಸಿಎಂ ನೇತೃತ್ವದಲ್ಲಿ ಡಿ.11ರಂದು ಸಭೆ