ಎಸ್ಎಸ್ಎಲ್‌ಸಿ ಪರೀಕ್ಷೆಗಳಿಗೆ ಏಪ್ರಿಲ್ 2006 ರಿಂದ ಪ್ರಶ್ನೋತ್ತರ ಪತ್ರಿಕೆ ಜಾರಿಗೆ ಬಂದಿದ್ದು, 2016ನೇ ಜೂನ್ ವರೆಗೆ ಈ ಪದ್ಧತಿಯಲ್ಲಿ ಪರೀಕ್ಷೆ ನಡೆಸಲಾಗಿರುತ್ತದೆ. 2017 ರ ಮಾರ್ಚ್ / ಏಪ್ರಿಲ್ ನಿಂದ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಪ್ರತ್ಯೇಕವಾಗಿ ವಿದ್ಯಾರ್ಥಿಗಳಿಗೆ ನೀಡಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಅವರು ತಿಳಿಸಿದರು.
ಪ್ರಶ್ನೆ ಪತ್ರಿಕೆಯ ಸುರಕ್ಷತೆ ಮತ್ತು ಮುದ್ರಣ, ಸಾಗಾಣಿಕೆ ಹಾಗೂ ಸಂಗ್ರಹಣಾ ವ್ಯವಸ್ಥೆಯ ಸಾಮರ್ಥ್ಯವನ್ನು ಉತ್ತಮ ಪಡಿಸಲು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಪ್ರತ್ಯೇಕಗೊಳಿಸಲಾಗುತ್ತಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ನಂತರ ಪ್ರಶ್ನೆ ಪತ್ರಿಕೆಯನ್ನು ಮನೆಗೆ ತೆಗೆದುಕೊಂಡು ಹೋಗಿ ಉತ್ತರಗಳ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.