ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2 ರ ವೇಳಾಪಟ್ಟಿ ಪ್ರಕಟಿಸಲಾಗಿದೆ. ಯಾವಾಗ ಪರೀಕ್ಷೆ ಆರಂಭವಾಗಲಿದೆ ಇಲ್ಲಿದೆ ವಿವರ.
ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಪರೀಕ್ಷಾ ದಿನಾಂಕವನ್ನು ಘೋಷಿಸಿದೆ. ಅದರಂತೆ ಮೊದಲು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ ಅಂತ್ಯಕ್ಕೆ ಪರೀಕ್ಷೆ ಆರಂಭವಾಗಲಿದೆ.
ಮಾರ್ಚ್ 23 ರಿಂದ ಏಪ್ರಿಲ್ 2 ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ಹಾಗೂ ಏಪ್ರಿಲ್ 25 ರಿಂದ ಮೇ 9 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾಂಕಗಳ ಮಾಹಿತಿಯನ್ನು ಮಂಡಳಿಯ ವೆಬ್ ಸೈಟ್ ನಲ್ಲೂ ಪ್ರಕಟಿಸಲಾಗಿದೆ.