Webdunia - Bharat's app for daily news and videos

Install App

ಮೇಕೆದಾಟು ಜಲವಿದ್ಯುತ್ ಯೋಜನೆಗೆ ಕರ್ನಾಟಕ ಬ್ರೇಕ್

Webdunia
ಸೋಮವಾರ, 21 ಏಪ್ರಿಲ್ 2014 (10:53 IST)
ಬೆಂಗಳೂರು: ಮೇಕೆದಾಟು ಬಳಿ ಜಲವಿದ್ಯುತ್ ಯೋಜನೆಯನ್ನು ಆರಂಭಿಸುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಈ ಕುರಿತು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿರುವುದರಿಂದ ತಮಿಳುನಾಡು ಸರ್ಕಾರದ ವಿರುದ್ದ ಕಾನೂನು ಹೋರಾಟ ತಪ್ಪಿಸಲು ಯೋಜನೆಯನ್ನು ಕೈಬಿಡಲಾಗಿದೆ ಎಂದು ಡಿಕೆಶಿ ಹೇಳಿದರು.

ಭಾನುವಾರ ಕೃಷ್ಣಗಿರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ. ಚೆಲ್ಲಕುಮಾರ್‌ ಪರ ಪ್ರಚಾರ ನಡೆಸಿದ ನಂತರ ಇಂಧನ ಸಚಿವ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದರು. ಕಳೆದ ವರ್ಷ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ ಮೇಕೆದಾಟು ಯೋಜನೆಯನ್ನು ಆರಂಭಿಸುವುದಾಗಿ ತಿಳಿಸಿದರು.

ಆದರೆ ಕಾವೇರಿ ಕೊಳ್ಳದಲ್ಲಿ ಯಾವುದೇ ಯೋಜನೆ ಆರಂಭಿಸುವುದು ಜಲತೀರ್ಪಿನ ಉಲ್ಲಂಘನೆಯಾಗುತ್ತದೆಯಾದ್ದರಿಂದ ಈ ಯೋಜನೆ ಕೈಬಿಡಲು ಉದ್ದೇಶಿಸಿರುವುದಾಗಿ ಡಿಕೆಶಿ ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಕೂಡ ಪತ್ರ ಬರೆದು ಈ ಯೋಜನೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments