Select Your Language

Notifications

webdunia
webdunia
webdunia
webdunia

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Vidhana Soudha

Krishnaveni K

ಬೆಂಗಳೂರು , ಗುರುವಾರ, 9 ಅಕ್ಟೋಬರ್ 2025 (10:08 IST)
ಬೆಂಗಳೂರು: ಮಹಿಳಾ ನೌಕರರಿಗೆ ಇನ್ನು ಋತುಚಕ್ರದ ದಿನ ರಜೆ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈ ಬಗ್ಗೆ ಇಂದು ಮಹತ್ವದ ನಿರ್ಧಾರ ಪ್ರಕಟಿಸಲಿದೆ.

ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಇದೀಗ ಮಹಿಳೆಯರಿಗೆ ಪ್ರತೀ ತಿಂಗಳು ಒಂದು ದಿನ ಋತುಚಕ್ರದ ರಜೆ ನೀಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ.

ತಿಂಗಳಿಗೆ ಒಂದು ದಿನ ಮಹಿಳೆಯರಿಗೆ ಋತುಚಕ್ರದ ವೇತನ ಸಹಿತ ರಜೆ ಸಿಗಲಿದೆ. ಈ ನಿಟ್ಟಿನಲ್ಲಿ ಋತುಚಕ್ರ ರಜೆ ನೀತಿ-2025 ಅನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದೆ.

ಒಂದು ವೇಳೆ ರಾಜ್ಯ ಸರ್ಕಾರ ಇಂತಹದ್ದೊಂದು ನಿಯಮ ಜಾರಿಗೆ ತಂದರೆ ಅದು ಐತಿಹಾಸಿಕ ನಿರ್ಧಾರವಾಗಲಿದೆ. ಈ ನಿಯಮ ಕೇವಲ ಸರ್ಕಾರಿ ಮಾತ್ರವಲ್ಲ ಖಾಸಗಿ ಸಂಸ್ಥೆಯ ನೌಕರರಿಗೂ ಅನ್ವಯವಾಗಲಿರುವುದು  ವಿಶೇಷವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಾಸನಾಂಬೆಯ ದೇವಾಲಯ ಇಂದು ಓಪನ್: ಭಕ್ತಾದಿಗಳಿಗೆ ಹೊಸ ರೂಲ್ಸ್ ತಪ್ಪದೇ ಗಮನಿಸಿ