Daily Horoscope

Select Your Language

Notifications

webdunia
webdunia
webdunia
webdunia

Karnataka Weather: ಮಲೆನಾಡು, ಕರಾವಳಿಯಲ್ಲಿ ಮಳೆ ಸ್ಯಾಧ್ಯತೆ; ಉಳಿದೆಡೆ ಹೇಗಿರಲಿದೆ ವಾತಾವರಣ

Karnataka rains
ಬೆಂಗಳೂರು: ಕರ್ನಾಟಕದಲ್ಲಿ ಇಂದಿನ ಹವಾಮಾನ ಮುನ್ಸೂಚನೆಯ ವರದಿ ಇಲ್ಲಿದೆ. ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡಕವಿದ ವಾತಾವರಣದೊಂದಿಗೆ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉಳಿದೆಡೆ ಒಣ ಹವಾಮಾನ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಮತ್ತು ರಾಜಧಾನಿ ಬೆಂಗಳೂರು
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಭ್ರ ಅಥವಾ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ರಿಂದ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಬೆಳಗಿನ ಜಾವ ಸಾಧಾರಣ ಚಳಿ ಹಾಗೂ ಮಂಜಿನ ವಾತಾವರಣ ಕಂಡುಬರಲಿದ್ದು, ಮಳೆಯ ಮುನ್ಸೂಚನೆ ಇಲ್ಲ.

ಮಲೆನಾಡು ಮತ್ತು ಕರಾವಳಿ ಭಾಗ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಕಂಡುಬರಲಿದೆ. ಇನ್ನು ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಮತ್ತು ಬಿಸಿಲ ನಾಡು
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನವೇ ಮುಂದುವರಿಯಲಿದೆ. ಈ ಭಾಗಗಳಲ್ಲಿ ಹಗಲಿನ ವೇಳೆ ಉಷ್ಣಾಂಶ ಹೆಚ್ಚಿರಲಿದ್ದು, ರಾತ್ರಿಯ ವೇಳೆಗೆ ತಂಪಾದ ಗಾಳಿ ಬೀಸಲಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಖಂಡದಲ್ಲಿ ಕನ್ನಡಿಗರಿದ್ದ ಹೆಲಿಕಾಪ್ಟರ್ ದುರಂತ: ಇಬ್ಬರು ಸಾವು, ಕೊನೆಯ ಕ್ಷಣ ವಿಡಿಯೋ ವೈರಲ್