Webdunia - Bharat's app for daily news and videos

Install App

Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

Sampriya
ಬುಧವಾರ, 30 ಏಪ್ರಿಲ್ 2025 (10:26 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ  ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಹಾಗೂ ಸಂಜೆ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಧ್ಯಾಹ್ನದ ಬಿಸಿಲ ತಾಪಕ್ಕೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವ ಪರಿಸ್ಥಿತಿ ಸದ್ಯ ರಾಜ್ಯದಲ್ಲಿದೆ ಉಂಟಾಗಿದೆ. ಬಿಸಿಲ ತಾಪದ ಜತೆಗೆ ಹಲವೆಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯಿದೆ.

ಇನ್ನೂ ಕರಾವಳಿ ಭಾಗದಲ್ಲಿ ಮಧ್ಯಾಹ್ನ ಉರಿಬಿಸಿಲಿಗೆ ಜನತೆ ತತ್ತರಿಸಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಗೆ ಚಿಂತೆಗೊಳಗಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉರಿಬಿಸಿಲನ ಜತೆಗೆ ಈಚೆಗೆ ಸಂಜೆಗೆ ಮಳೆಯಾಗುತ್ತಿದೆ.

ಇನ್ನೂ ಉತ್ತರ ಕರ್ನಾಟಕದಲ್ಲಿ ವಿಪರೀತ ಬಿಸಿಲಿನಿಂದ ಜನತೆ ಕಂಗೆಟ್ಟಿದ್ದಾರೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ. ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ ಇಂದು 19 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯ ಪೈಕಿ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಪೈಕಿ ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಪೈಕಿ ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 5ರ ಸೋಮವಾರದವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments