Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

Sampriya
ಭಾನುವಾರ, 23 ನವೆಂಬರ್ 2025 (10:22 IST)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹೀಗಾಗಿ, ಸೋಮವಾರತನಕ ಬೆಂಗಳೂರು, ಕೋಲಾರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಹೆಚ್ಚು.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ಮತ್ತು ಮಳೆಯ ಆಟ ಆರಂಭವಾಗಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಹಾಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ತೀವ್ರ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments