Select Your Language

Notifications

webdunia
webdunia
webdunia
webdunia

Karnataka WEATHER:ಕರಾವಳಿಯಲ್ಲಿ ಇನ್ನೂ ಒಂದು ವಾರ ಭಾರಿ ಮಳೆ, ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

Yellow Alert in Coastal Districts, Meteorological Department, Karnataka Weather

Sampriya

ಬೆಂಗಳೂರು , ಭಾನುವಾರ, 31 ಆಗಸ್ಟ್ 2025 (10:11 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ.  ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಪ್ರದೇಶವಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿಯೂ ಮಳೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇದ್ದು ಮಳೆಯಾಗುವ ಸಾಧ್ಯತೆ ಇದೆ. ತೆರಳದಂತೆ ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹವಾಮಾನಕ್ಕೆ ಯಾವುದೇ ಅಲರ್ಟ್ ನೀಡಲಾಗಿಲ್ಲ. ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌