ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆಗಾಲದಂತೆ ಭರ್ಜರಿ ಮಳೆಯಾಗುತ್ತಿದೆ. ಇದರ ನಡುವೆ ಹವಾಮಾನ ಕುರಿತು ಮತ್ತೊಂದು ಬಿಗ್ ಅಪ್ ಡೇಟ್ ಸಿಗುತ್ತಿದೆ.
ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ದಿನವಿಡೀ ಮೋಡ ಕವಿದ ವಾತಾವರಣ, ವಿಪರೀತ ಮಳೆ ನೋಡಿದರೆ ಮಳೆಗಾಲ ಆಗಲೇ ಶುರುವಾಗಿಬಿಟ್ಟಿತೇನೋ ಎಂಬ ಫೀಲ್ ಇದೆ. ಇದರ ನಡುವೆ ಮತ್ತೊಂದು ಸುದ್ದಿ ಸಿಕ್ಕಿದೆ.
ಅರೆಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಯ ವಾತಾವರಣ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಬೆಂಗಳೂರು, ತುಮಕೂರು, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡಾ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಜಿಲ್ಲೆಗಳಲ್ಲಿಇಂದೂ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಮೇ 22 ರವರೆಗೆ ಭಾರೀ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.