Select Your Language

Notifications

webdunia
webdunia
webdunia
webdunia

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

Karnataka Weather, Yellow Alert Announcement, Chance of Rain in Capital Bangalore

Sampriya

ಬೆಂಗಳೂರು , ಭಾನುವಾರ, 22 ಜೂನ್ 2025 (10:51 IST)
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಜೂನ್‌ 26ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಜೂನ್‌ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಸೇರಿ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು  ಯೆಲ್ಲೋ ಅಲರ್ಟ್‌ ಘೋಷಿಸಿದೆ. 

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. 

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಮಂಡ್ಯ, ದಾವಣಗೆರೆ, ತುಮಕೂರು ಹಗುರ ಮಳೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌