Webdunia - Bharat's app for daily news and videos

Install App

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

Sampriya
ಭಾನುವಾರ, 22 ಜೂನ್ 2025 (10:51 IST)
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಜೂನ್‌ 26ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಜೂನ್‌ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಸೇರಿ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು  ಯೆಲ್ಲೋ ಅಲರ್ಟ್‌ ಘೋಷಿಸಿದೆ. 

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. 

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಮಂಡ್ಯ, ದಾವಣಗೆರೆ, ತುಮಕೂರು ಹಗುರ ಮಳೆಯಾಗುವ ಸಾಧ್ಯತೆ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಮುಂದಿನ ಸುದ್ದಿ
Show comments