ಬೆಂಗಳೂರು: ರಾಜ್ಯದಲ್ಲಿ ಈಗ ಹಲವೆಡೆ ವಿಪರೀತ ಚಳಿಯಾಗಿದ್ದರೆ ಮತ್ತೆ ಕೆಲವು ಕಡೆ ತುಂತುರು ಮಳೆಯೂ ಕಂಡುಬರುತ್ತಿದೆ. ಇಂದೂ ಕೂಡಾ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ.
ವಾರಂತ್ಯದಲ್ಲಿ ವಿಪರೀತ ಚಳಿ, ಮೋಡ ಕವಿದ ವಾತಾವರಣವಿತ್ತು. ಇಂದೂ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿತ್ತು. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ.
ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲೂ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ. ಬೀದರ್ ನಲ್ಲೂ ತಾಪಮಾನ 14 ಡಿಗ್ರಿಗೆ ಇಳಿಯಲಿದ್ದು ವಿಪರೀತ ಚಳಿ ಕಂಡುಬರುವುದು. ಉಳಿದ ಜಿಲ್ಲೆಗಳಲ್ಲಿ ಸರಾಸರಿ ಕನಿಷ್ಠ ತಾಪಮಾನ 15-17 ಡಿಗ್ರಿಯವರೆಗೆ ನಿರೀಕ್ಷಿಸಲಾಗಿದೆ.