ಬೆಂಗಳೂರು: ರಾಜ್ಯದಲ್ಲಿ ಈಗ ಹಗಲು ಬಿಸಿಲು, ರಾತ್ರಿ ಗಡ ಗಡ ಚಳಿ ಎಂಬ ವಾತಾವರಣವಿದೆ. ಇಂದು ಚಳಿ ಹೇಗಿರಲಿದೆ, ರಾಜ್ಯದ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.
ರಾಜ್ಯದಲ್ಲಿ ಈ ಬಾರಿ ಚಳಿ ದಾಖಲೆಯ ಮಟ್ಟದಲ್ಲಿದೆ. ಇಂದೂ ಕೂಡಾ ವಿಪರೀತ ಚಳಿಯಿರಲಿದೆ. ಬೀದರ್, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ತೀರಾ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೀದರ್, ಗದಗದಲ್ಲಿ ಇಂದು ತಾಪಮಾನ 12 ಡಿಗ್ರಿಯಷ್ಟಕ್ಕೆ ಇಳಿಕೆಯಾಗಲಿದೆ.
ಉಳಿದಂತೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಕೊಪ್ಪಳ, ತುಮಕೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬರಲಿದೆ.