ಬೆಂಗಳೂರು: ಇಂದು ರಾಜ್ಯಾದ್ಯಂತ ವಿಪರೀತ ಚಳಿ ಜೊತೆಗೆ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದಿನ ಹವಾಮಾನ ವರದಿಗಳು ಇಲ್ಲಿವೆ.
ವಾರದ ಆರಂಭಕ್ಕೆ ಹೋಲಿಸಿದರೆ ಇಂದು ಮತ್ತಷ್ಟು ಚಳಿಯಿರಲಿದೆ. ತಾಪಮಾನ ಮತ್ತಷ್ಟು ಇಳಿಕೆಯಾಗುತ್ತಿದೆ. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ.
ಇನ್ನು, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವೂ ಕಂಡುಬರುವುದು. ಇದರೊಂದಿಗೆ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವೂ 14 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು.
ಇನ್ನು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವುದು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರುವುದು. ವಾರಂತ್ಯಕ್ಕೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.