Select Your Language

Notifications

webdunia
webdunia
webdunia
webdunia

Karnataka Weather: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತ ಗಾಳಿಯ ಎಚ್ಚರಿಕೆ

Karnataka Weather

Sampriya

ಬೆಂಗಳೂರು , ಗುರುವಾರ, 25 ಡಿಸೆಂಬರ್ 2025 (12:27 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾಂತ್ಯದ ಮೈಕೊರೆಯುವ ಚಳಿ ಜೋರಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಹೆಚ್ಚಾಗಿದೆ. 

ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಗುರುವಾರವೂ  ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶುಭ್ರ ಆಕಾಶ ಗೋಚರವಾಗಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು/ಮಂಜು ಕವಿದ ವಾತಾವರಣ ಇರಲಿದೆ. 

ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಲಿದ್ದು, ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ರಾಜ್ಯದ ಉತ್ತರ ಒಳನಾಡಿನ ಬೀದರ್‌ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ.

ಬುಧವಾರ ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತಿ ಕನಿಷ್ಠ ತಾಪಮಾನ ಬೀದರ್‌ನಲ್ಲಿ 9.5 ಡಿಗ್ರಿ ಸೆಲ್ಸಿಯಸ್‌ ಕಂಡುಬಂತು. ಉತ್ತರ ಒಳನಾಡಿನ ಬೀದರ್‌ನಿಂದ ರಾಯಚೂರುವರೆಗೆ ಶೀತ ಗಾಳಿ ಬೀಸಿದೆ.

ಉತ್ತರ ಒಳನಾಡಿನ ಬೀದರ್, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು  ಬುಧವಾರ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಉತ್ತರ ಒಳನಾಡಿನ ಗದಗ, ಧಾರವಾಡ ಮತ್ತು ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಂತಾಮಣಿ, ದಾವಣಗೆರೆ, ಶಿವಮೊಗ್ಗದಲ್ಲಿ ಸಾಮಾನ್ಯಕ್ಕಿಂತ ಕುಸಿತ ದಾಖಲಿಸಿತ್ತು. ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಬಳಿ ತಾಪಮಾನ ಕೊಂಚ ಏರಿಕೆಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರದುರ್ಗ ಬಸ್ ದುರಂತ: ಮೃತ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ ಘೋಷಣೆ, ಕಂಬನಿ ಮಿಡಿದ ರಾಷ್ಟ್ರಪತಿ