Daily Horoscope
✕

Karnataka Weather: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತ ಗಾಳಿಯ ಎಚ್ಚರಿಕೆ

Sampriya
ಗುರುವಾರ, 25 ಡಿಸೆಂಬರ್ 2025 (12:27 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾಂತ್ಯದ ಮೈಕೊರೆಯುವ ಚಳಿ ಜೋರಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಹೆಚ್ಚಾಗಿದೆ. 

ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಗುರುವಾರವೂ  ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶುಭ್ರ ಆಕಾಶ ಗೋಚರವಾಗಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು/ಮಂಜು ಕವಿದ ವಾತಾವರಣ ಇರಲಿದೆ. 

ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಲಿದ್ದು, ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ರಾಜ್ಯದ ಉತ್ತರ ಒಳನಾಡಿನ ಬೀದರ್‌ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ.

ಬುಧವಾರ ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತಿ ಕನಿಷ್ಠ ತಾಪಮಾನ ಬೀದರ್‌ನಲ್ಲಿ 9.5 ಡಿಗ್ರಿ ಸೆಲ್ಸಿಯಸ್‌ ಕಂಡುಬಂತು. ಉತ್ತರ ಒಳನಾಡಿನ ಬೀದರ್‌ನಿಂದ ರಾಯಚೂರುವರೆಗೆ ಶೀತ ಗಾಳಿ ಬೀಸಿದೆ.

ಉತ್ತರ ಒಳನಾಡಿನ ಬೀದರ್, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು  ಬುಧವಾರ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಉತ್ತರ ಒಳನಾಡಿನ ಗದಗ, ಧಾರವಾಡ ಮತ್ತು ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಂತಾಮಣಿ, ದಾವಣಗೆರೆ, ಶಿವಮೊಗ್ಗದಲ್ಲಿ ಸಾಮಾನ್ಯಕ್ಕಿಂತ ಕುಸಿತ ದಾಖಲಿಸಿತ್ತು. ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಬಳಿ ತಾಪಮಾನ ಕೊಂಚ ಏರಿಕೆಯಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸಿ ರೈಲು ಬೋಗಿಯೊಳಗೆ ದೀಪ ಹಚ್ಚಿ ಪೂಜೆ, ಶಂಖನಾದ ಮಾಡಿದ ವ್ಯಕ್ತಿ: ವೈರಲ್ ಆಯ್ತು Video

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿದ ಕಾಂಗ್ರೆಸ್ ಇಂದು ಸಂವಿಧಾನದ ರಕ್ಷಕ ಎಂದು ಬಿಂಬಿಸಿಕೊಳ್ಳುತ್ತಿದೆ: ವಿಜಯೇಂದ್ರ

ಆಭರಣ ಪ್ರಿಯರಿಗೆ ಶಾಕ್: ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಚಿನ್ನದ ದರ ಎಷ್ಟಾಗಿದೆ ಗೊತ್ತಾ

ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡ್ತೀನಿ, ಬಿಜೆಪಿಯವರು ಯಾಕೆ ಕೇಂದ್ರದಿಂದ ಹಣ ಕೇಳಲ್ಲ: ಸಿಎಂ ಡಿಕೆ ಶಿವಕುಮಾರ್

ಮೀರತ್ ಹೋಟೆಲ್ ಕೇಸ್ಗೆ ಬಿಗ್ ಟ್ವಿಸ್ಟ್: ಹಿಂದೂ ಯುವತಿಯ ಎಳೆದೊಯ್ದಿದ್ದ ಯುವಕನಿಗೆ ಈ ಗತಿ ತಂದಿತ್ತ ಯುಪಿ ಪೊಲೀಸರು Video

ಮುಂದಿನ ಸುದ್ದಿ
Show comments