Publish Date: Wed, 26 Nov 2025 (08:18 IST)
Updated Date: Wed, 26 Nov 2025 (08:20 IST)
ಬೆಂಗಳೂರು: ಸೈಕ್ಲೋನ್ ಇಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಮೊನ್ನೆಯಿಂದ ಸಾಧಾರಣ ಮಳೆ ಮತ್ತು ಮೋಡಕವಿದ ವಾತಾವರಣವಿದೆ. ಇನ್ನೆಷ್ಟು ದಿನ ಮಳೆಯಿರಲಿದೆ, ಇಂದು ಮಳೆ ಬರುತ್ತಾ ಇಲ್ಲಿದೆ ಹವಾಮಾನ ವರದಿ.
ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ನವಂಬರ್ ನಲ್ಲೂ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಜೊತೆಗೆ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ಬಂಗಾಳದಲ್ಲಿ ರೂಪುಗೊಂಡಿರುವ ಸೈಕ್ಲೋನ್ ನಿಂದಾಗಿ ಈ ವಾರಂತ್ಯದವರೆಗೂ ಇದೇ ವಾತಾವರಣವಿರಲಿದೆ ಎನ್ನಲಾಗುತ್ತಿದೆ. ಮೈಸೂರು, ಮಂಡ್ಯ, ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಲ್ಲಿ ಇಂದೂ ದಿನವಿಡೀ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಿರಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿತ್ರದುರ್ಗ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಗದಗ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.