ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಒಣ ಹವೆ ಇರಲಿದೆ. ನ.11ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು ಚಳಿ ಶುರುವಾಗಿದೆ. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿ ಇರಲಿದೆ. ಕೆಲವೆಡೆ ಸಂಜೆಯ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ.11ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಒಣಹವೆ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.