ಬೆಂಗಳೂರು: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಯಲಿದೆ. ಕಳೆದ ಕೆಲವು ದಿನಗಳಿದ್ದಂತೆ ಇಂದೂ ಗಡ ಗಡ ಚಳಿ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ತೀವ್ರವಾಗಿದೆ. ಇಂದೂ ಕೂಡಾ ವಿಪರೀತ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಸಂಜೆ ಮತ್ತು ಬೆಳಗ್ಗಿನ ಹೊತ್ತು ಮನೆಯಿಂದ ಹೊರಗೆ ಹೋಗದೇ ಇರುವುದೇ ಉತ್ತಮ.
ಬೆಂಗಳೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ತುಮಕೂರು, ಚಾಮರಾಜನಗರ, ಕೊಡಗು, ಹಾಸನ, ವಿಜಯನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರುವುದು.
ಬೆಂಗಳೂರಿನಲ್ಲಿ ಶೀತದ ಜೊತೆಗೆ ಬೆಳಗ್ಗಿನ ಹೊತ್ತು ದಟ್ಟ ಮಂಜು ಕವಿದ ವಾತಾವರಣ ಕಂಡುಬರುತ್ತಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ.