ಇನ್ನು ಮೂರು ದಿನ ಭಾರೀ ಮಳೆ, ಏಳು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

Krishnaveni K
ಗುರುವಾರ, 27 ಜೂನ್ 2024 (09:29 IST)
ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷೆಯಂತೇ ಆಗುತ್ತಿದ್ದು, ಇನ್ನು ಮೂರು ದಿನಗಳ ಕಾಲ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ವಿಜಯಪುರ, ಹಾವೇರಿ, ಕಲಬುರಗಿ, ಧಾರವಾಡ, ಮಂಡ್ಯ, ಮೈಸೂರಿನಲ್ಲೂ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಮೈಸೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದು ಇನ್ನೂ ಮೂರು ದಿನ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಬಹುತೇಕ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಲೇ ಇದೆ. ಜೂನ್ 29 ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments