ಬೆಂಗಳೂರು: ಸತತ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ದಿನದಿಂದ 13 ರಾಜ್ಯಗಳಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸಮುದ್ರಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರಿಂದಾಗಿ ಫೆಬ್ರವರಿ 15 ರಿಂದ 21 ರ ನಡುವೆ ಮಳೆ ಮತ್ತು ಉತ್ತರದ ಕೆಲವು ಭಾಗಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ.
ಫೆಬ್ರವರಿ 19 ರಂದು ಈಶಾನ್ಯದ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಪಶ್ಚಿಮ ಬಂಗಾಲ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಸಿಕ್ಕಿಂನಲ್ಲೂ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರದ ರಾಜ್ಯಗಳಲ್ಲಿ ಭಾರೀ ಮಳೆಯ ಸೂಚನೆ ಸಿಕ್ಕಿದೆ.