ಬೆಂಗಳೂರು: ರಾಜ್ಯದಲ್ಲಿ ಇದೀಗ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ಈ ವಾರಂತ್ಯದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಎರಡು ದಿನಗಳಿಂದ ಮಳೆಯ ವಾತಾವರಣವಿರಲಿದೆ. ಇಂದೂ ಮಳೆಯ ನಿರೀಕ್ಷೆಯಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ನಿರೀಕ್ಷೆ ಮಾಡಲಾಗಿದೆ.
ಹಾಸನ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲೂ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 31 ಡಿಗ್ರಿಯಷ್ಟಿರಲಿದೆ.