ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯ ನಿರೀಕ್ಷೆಯಿದೆ.
ಬೇಗೂರು, ಕೃಷ್ಣರಾಜಸಾಗರ, ಗುಂಡ್ಲುಪೇಟೆಯಲ್ಲಿ ಭಾರಿ ಮಳೆಯಾಗಿದೆ. ಬಂಡೀಪುರ, ಭಾಗಮಂಡಲ, ಕೃಷ್ಣರಾಜಪೇಟೆ, ಎಚ್ಡಿ ಕೋಟೆ, ಮಂಡ್ಯ, ಕೋಲಾರ, ಶ್ರೀರಂಗಪಟ್ಟಣ, ರಾಯಲ್ಪಾಡು, ಎಂಎಂ ಹಿಲ್ಸ್, ಶಿಗ್ಗಾಂವ್, ಹಾವೇರಿ, ಹುಬ್ಬಳ್ಳಿ, ಕೆಆರ್ ನಗರ, ಚನ್ನರಾಯಪಟ್ಟಣ ಹಾಗೂ ಬೆಂಗಳೂರಿನ ಕೆಲ ಭಾಗಗಳಲ್ಲಿ ಮಳೆಯಾಗಿದೆ.
ಹವಾಮಾನ ಇಲಾಖೆ ಇಂದಿನವರೆಗೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರಂತೆ ಅಲ್ಲಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು.