ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡದ ಹಲವೆಡೆ ಇಂದು ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಾಳೆ ರಾಜ್ಯದ ವಿವಿಢೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಅದಲ್ಲದೆ ಕರ್ನಾಟಕದ ಹಲವೆಡೆ ಭಾನುವಾರದವರೆಗೆ ಮಳೆಯಾಗುವ ಮುನ್ಸೂಚನೆಯಿದ್ದು, ಇದರಿಂದ ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಯಿಂದ ಸುಸ್ತಾದ ಜನರಿಗೆ ತರುಣ ತಂಪೆರೆಯುವ ಸಾಧ್ಯತೆಯಿದೆ.
ನಾಳೆ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಲೆಯಾಗುವ ಸಾಧ್ಯತೆಯಿದೆ.
ಅದಲ್ಲದೆ ಕೆಲವೆಡೆ ಆಲಿಕಲ್ಲು ಮಳೆಯಾಗುವ ಮುನ್ಸೂಷನೆಯನ್ನು ಹವಾಮಾನ ಇಲಾಖೆ ನೀಡಿದೆ.