Select Your Language

Notifications

webdunia
webdunia
webdunia
webdunia

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

Karnataka Meteorology, Meteorological Department, South Interior

Sampriya

ಬೆಂಗಳೂರು , ಮಂಗಳವಾರ, 7 ಅಕ್ಟೋಬರ್ 2025 (10:20 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಕೋಲಾರ,ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಧಾರವಾಡ, ಬೀದರ್, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ. 

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ