Publish Date: Tue, 19 May 2026 (08:40 IST)
Updated Date: Tue, 19 May 2026 (08:42 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮುಂಗಾರು ಪೂರ್ವ ಮಳೆ ಜೋರಾಗಿದ್ದು, ಮಳೆಗಾಲದ ವಾತಾವರಣವಿದೆ. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ನಿರಂತರವಾಗಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಂತೂ ನಿರಂತರ ಮಳೆಯಾಗುತ್ತಲೇ ಇದೆ. ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಿತ್ತು. ವರದಿಗಳ ಪ್ರಕಾರ ಇಂದು ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ಚಾಮರಾಜನಗರ, ಕೊಪ್ಪಳ, ಗದಗ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಕೊಡಗು, ಹಾವೇರಿ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ದಟ್ಟ ಮೋಡ ಕವಿದ ವಾತಾವರಣವಿರಲಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರುವುದು. ಇಂದು ರಾಜ್ಯದ ಗರಿಷ್ಠ ತಾಪಮಾನ 32 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಕಂಡುಬರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ