Publish Date: Wed, 11 Jun 2025 (08:39 IST)
Updated Date: Wed, 11 Jun 2025 (08:41 IST)
ಬೆಂಗಳೂರು: ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ.
ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ಬೆಂಗಳೂರಿನಲ್ಲೂ ಮೊನ್ನೆ ತಕ್ಕ ಮಟ್ಟಿಗೆ ಮಳೆಯಾಗಿತ್ತು. ಇಂದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ ಇಂದು ಮತ್ತು ನಾಳೆ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ.
ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಕೋಲಾರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.