ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರವಾಗುತ್ತಿದ್ದು, ಈ ಕೆಲವು ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆಯಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಇನ್ನು ಮೂರು ದಿನಗಳಿಗೆ ಅಂದರೆ ಜುಲೈ 12 ರವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ. ಮೀನುಗಾರರಿಗೆ ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ತೀವ್ರ ಮಳೆಯ ಜೊತೆಗೆ ಭಾರೀ ಗಾಳಿಯೂ ಕಂಡುಬರಲಿದೆ.
ಉಳಿದಂತೆ ಬೆಂಗಳೂರು, ಮೈಸೂರು, ತುಮಕೂರು, ಉತ್ತರ ಕನ್ನಡ, ಬೆಳಗಾವಿ, ಹುಬ್ಬಳ್ಳಿ, ಬಾಗಲಕೋಟೆ, ಕೊಪ್ಪಳ, ಗದಗ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.