ಬೆಂಗಳೂರು: ರಾಜ್ಯದಲ್ಲಿ ಈ ವಾರ ಮಳೆಯ ಅಬ್ಬರ ಕಳೆದ ವಾರದಷ್ಟು ಇಲ್ಲ. ಹಾಗಿದ್ದರೂ ಇಂದು ಕರಾವಳಿ ಜಿಲ್ಲೆಗಳಿಗೆ ಅಲ್ಲ, ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ.
ಈ ಬಾರಿ ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಿತ್ತು. ಆದರೆ ಈ ವಾರ ಯಾಕೋ ಕರಾವಳಿ ಜಿಲ್ಲೆಗಳಲ್ಲಿ ಮಳೆಗಿಂತ ಬಿಸಿಲು ಹೆಚ್ಚಾಗಿದೆ. ಆಗೊಮ್ಮೆ ಈಗೊಮ್ಮೆ ಸಣ್ಣ ಮಳೆಯಾಗಿದ್ದು ಬಿಟ್ಟರೆ ವಾರವಿಡೀ ಮಳೆಯಿರಲಿಲ್ಲ. ಇಂದೂ ಕೂಡಾ ಉತ್ತರ ಕರ್ನಾಟಕದಲ್ಲಿ ಸಣ್ಣ ಮಳೆ ಬಿಟ್ಟರೆ ಉಳಿದ ಕಡೆ ಮಳೆಯ ಸೂಚನೆಯಿಲ್ಲ.
ಆದರೆ ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸೂಚನೆಯಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದೂ ಹವಾಮಾನ ವರದಿಗಳು ಹೇಳುತ್ತಿವೆ.
ಕೊಪ್ಪಳ, ಬಳ್ಳಾರಿ, ರಾಯಚೂರು, ಹಾವೇರಿ, ಬೀದರ್, ಕೊಪ್ಪಳ, ಗದಗ, ಬೆಂಗಳೂರು, ಕೋಲಾರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರುವ ಸಾಧ್ಯತೆಯಿದೆ.