Select Your Language

Notifications

webdunia
webdunia
webdunia
webdunia

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

Karnataka Rain
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಲೇ ಇದೆ. ಅದರಲ್ಲೂ ಇಂದಿನಿಂದ ರಾಜ್ಯಾದ್ಯಂತ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಕಳೆದ ವಾರವಿಡೀ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರವೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಿನ್ನೆಯೇ ಈ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ಇಂದಿನಿಂದ ಎರಡು ದಿನಗಳ ಕಾಲ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ. ಉಡುಪಿಯಲ್ಲಿಇಂದು ಮಳೆಯ ಜೊತೆಗೆ ಭಾರೀ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಶಿವಮೊಗ್ಗ, ಕೊಪ್ಪಳ, ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ಹಾವೇರಿ, ರಾಯಚೂರು, ವಿಜಯಪುರ, ಬೀದರ್, ಗದಗ, ದಾವಣಗೆರೆ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌