Publish Date: Tue, 10 Jun 2025 (08:28 IST)
Updated Date: Tue, 10 Jun 2025 (08:30 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ನಿನ್ನೆಯಿಂದಲೇ ಹಲವೆಡೆ ಮಳೆಯಾಗಿದೆ. ಇಂದು ಮಳೆ ರಭಸ ಮತ್ತಷ್ಟು ಹೆಚ್ಚಾಗಲಿದೆ. ಹವಾಮಾನ ಇಲಾಖೆಯ ಈ ಎಚ್ಚರಿಕೆಯನ್ನು ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಆದರೆ ಇಂದು ಮಳೆ ಮತ್ತಷ್ಟು ತೀವ್ರವಾಗಲಿದೆ. ವಾರಂತ್ಯದ ವೇಳೆಗೆ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13 ರ ಬಳಿಕ ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಜೂನ್ 15 ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲದೆ ಕೊಡಗು, ಮೈಸೂರು, ಹಾಸನ, ಮಂಡ್ಯ, ಗದಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.